‘ಭಾರತ್ ಬಂದ್’

‘ಭಾರತ್ ಬಂದ್’

ವಿವಿಧ ಕಾರ್ಮಿಕ ಸಂಘಟನೆಗಳ ಜೊತೆ ಗುರುತಿಸಿಕೊಂಡಿರುವ 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾರತ್ ಬಂದ್‌ಗೆ ಕರೆ ನೀಡಿರುವ ಪರಿಣಾಮವಾಗಿ ಬ್ಯಾಂಕಿಂಗ್, ಅಂಚೆ ಹಾಗೂ ಇತರ ಕೆಲವು ಸೇವೆಗಳಿಗೆ ಬುಧವಾವ ಅಡಚಣೆ ಉಂಟಾಗುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರವು ಹಲವು ನೀತಿಗಳನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಲಾಗಿದೆ.
ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೈಬಿಡಬೇಕು, ಗುತ್ತಿಗೆ ಪದ್ಧತಿ ಕೊನೆಗೊಳಿಸಬೇಕು, ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದನ್ನು ನಿಲ್ಲಿಸಬೇಕು ಹಾಗೂ ಕನಿಷ್ಠ ವೇತನವನ್ನು ರೂ.೨೬ ಸಾವಿರಕ್ಕೆ ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ಸಿಇಟಿಯು, ಐಎನ್‌ಟಿಯುಸಿ ಮತ್ತು ಎಐಟಿಯುಸಿ ಸಂಘಟನೆಗಳು ಸರ್ಕಾರದ ಮುಂದಿರಿಸಿವೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೂಡ ಬಂದ್‌ಗೆ ಬೆಂಬಲ ಸೂಚಿಸಿದೆ.
ಆದರೆ, ಆರ್‌ಎಸ್‌ಎಸ್‌ನ ಭಾರತೀಯ ಮಜ್ದೂರ್ ಸಂಘವು (ಬಿಎಂಎಸ್) ಬಂದ್‌ಗೆ ಬೆಂಬಲ ನೀಡಿಲ್ಲ. ಈ ಬಂದ್ ರಾಜಕೀಯ ಪ್ರೇರಿತ ಎಂದು ಅದು ಹೇಳಿದೆ.
ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆಗಳು ನಡೆಯಲಿವೆ. ಬ್ಯಾಂಕಿಂಗ್, ಅಂಚೆ ಮತ್ತು ಸರ್ಕಾರಿ ಸ್ವಾಮ್ಯದ ಕಂಪನಿಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top